Loading...
mysqli_result Object ( [current_field] => 0 [field_count] => 5 [lengths] => [num_rows] => 1 [type] => 0 )

ಯುವ ನಾಯಕನ್ನು ಸಂಸತ್‌ಗೆ ಕಳುಹಿಸಿದ್ದೇನೆ: ಹೆಚ್‌ಡಿಡಿ

Blog-post Thumbnail

ಬೆಂಗಳೂರು: ಜೆಪಿ ಭವನದಲ್ಲಿ ಪಕ್ಷದ ನೂತನ ವೆಬ್ಸೈಟ್ ಉದ್ಘಾಟನೆ ‌ಮಾಡಿ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ್ರು ಯುವನಾಯಕ ಒಬ್ಬನನ್ನು ಪಾರ್ಲಿಮೆಂಟ್‌ಗೆ ಕಳುಹಿಸಿದ್ದೇನೆ. ನಾನು ಇಲ್ಲಿದ್ದುಕೊಂಡು ಪಕ್ಷ ಸಂಘಟನೆ ಮಾಡುತ್ತೇನೆ. ಉಪಚುನಾವಣೆಗೆ ಪ್ರಜ್ವಲ್‌ ನಿಲ್ಲುವುದಿಲ್ಲ,’ ಎಂದು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರು ತಿಳಿಸಿದ್ದಾರೆ. ‘ನಾನು ಇವತ್ತು ಹುಣಸೂರಿಗೆ ಹೋಗುತ್ತಿದ್ದೇನೆ. ಈಗಾಗಲೇ ನನ್ನ ಮನೆಯಲ್ಲಿ ಹುಣಸೂರಿನ ಹಳೆ ಸ್ನೇಹಿತರ ಜೊತೆ ಸಭೆ ಮಾಡಿದ್ದೇನೆ. ಅವರನ್ನು ಕರೆಸಿಕೊಂಡು ‌ಚುನಾವಣೆ ಕುರಿತು ಮಾತನಾಡಿದ್ದೇನೆ. ಅವರೆಲ್ಲರೂ ಒಂದು ಮಾತು ಹೇಳಿದ್ದಾರೆ. ಪ್ರತಿ ಬಾರಿ ಹೊರಗಿನ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ. ನಾವೂ ಅವರನ್ನು ಗೆಲ್ಲಿಸುತ್ತೇವೆ. ನಂತರ ಅವರು ಪಕ್ಷಕ್ಕೆ ದ್ರೋಹ ಮಾಡಿ ಹೋಗುತ್ತಾರೆ ಎಂದು ಅಲ್ಲಿನ ಕಾರ್ಯಕರ್ತರು ಹೇಳಿದ್ದಾರೆ. ಕೆಲವರು ಪ್ರಜ್ವಲ್ ನಿಲ್ಲಿಸಿ ನನ್ನನ್ನು ಪಾರ್ಲಿಮೆಂಟ್‌ಗೆ ಹೋಗುವಂತೆ ಸಲಹೆ ನೀಡಿದ್ದಾರೆ. ಅದಕ್ಕೇ ‌ನಾನು ಅವರಿಗೆ ಹೇಳಿದ್ದೇನೆ ಒಬ್ಬ ಯಂಗ್ ಮ್ಯಾನ್ ಪಾರ್ಲಿಮೆಂಟ್‌ಗೆ ಹೋಗಿದ್ದಾನೆ. ಹೀಗಾಗಿ ನಾನು ಪಕ್ಷ ‌ಕಟ್ಟುತ್ತೇನೆ ಎಂದಿದ್ದೇನೆ. ಕ್ಷೇತ್ರದ ಕಾರ್ಯಕರ್ತರೇ ಒಂದು ಸಭೆ‌ ಮಾಡಿ ‌ಸಮರ್ಥ ಅಭ್ಯರ್ಥಿ ಕೊಡುವುದಾಗಿ ತಿಳಿಸಿದ್ದಾರೆ,’ ಎಂದರು.