Loading...
mysqli_result Object ( [current_field] => 0 [field_count] => 5 [lengths] => [num_rows] => 1 [type] => 0 )

ಭಿನ್ನಮತದ ನಡುವೆಯೂ ಉಪ ಚುನಾವಣೆಗೆ ದೇವೇಗೌಡ ಸಿದ್ಧತೆ

Blog-post Thumbnail

ಬೆಂಗಳೂರು: ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದರೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಉಪ ಚುನಾವಣೆಗೆ ಭರ್ಜರಿ ಸಿದ್ಥತೆಗಳನ್ನು ನಡೆಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹೆಚ್.ಡಿ.ರೇವಣ್ಣ ಅವರು ಕುಟುಂಬ ರಾಜಕೀಯ ನಡೆಸುತ್ತಿದ್ದು, ಇದರಿಂದ ತೀವ್ರವಾಗಿ ಅಸಮಾಧಾನಗೊಂಡಿರುವ ಜೆಡಿಎಸ್ ಶಾಸಕರು, ಕಾಂಗ್ರೆಸ್ ಹಾಗೂ ಬಿಜೆಪಿಯತ್ತ ಮುಖ ಮಾಡಿದ್ದಾರೆ. ಪಕ್ಷದ ಬಗ್ಗೆ ಅಸಮಾಧಾನಗೊಂಡಿರುವ ಶಾಸಕರು ಅ.11 ರಂದು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ನಿನ್ನೆ ಕೂಡ ಈ ಬಗ್ಗೆ ಮಾತುಕತೆ ನಡೆಸಿದ್ದು, ದೀಪಾವಳಿ ಸಂದರ್ಭದಲ್ಲೂ ಪಕ್ಷದ ಕುರಿತು ಮಹತ್ವದ ನಿರ್ಧಾರಕ್ಕೆ ಬರಲಿದ್ದಾರೆಂದು ಹೇಳಲಾಗುತ್ತಿದೆ. ಈ ನಡುವೆ ಉಪ ಚುನಾವಣೆಗೆ ದೇವೇಗೌಡ ಅವರು ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿದ್ದು, ಪ್ರಚಾರದಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.