Loading...
mysqli_result Object ( [current_field] => 0 [field_count] => 5 [lengths] => [num_rows] => 1 [type] => 0 )

ಈ ಬಾರಿ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ನಿವಾಸದಲ್ಲಿಲ್ಲ ದೀಪಾವಳಿ ಸಡಗರ: ಹಬ್ಬದ ದಿನ ರಾಜಧಾನಿ ತೊರೆಯಲಿರುವ ಎಚ್​ಡಿಕೆ!

Blog-post Thumbnail

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಸಡಗರಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ಈ ಬಾರಿಯ ದೀಪಾವಳಿ ರಂಗು ಇರುವುದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಉತ್ತರ ಕರ್ನಾಟಕ ಭಾಗದಲ್ಲಿ ತೀವ್ರ ಪ್ರವಾಹದಿಂದ ಜನತೆ ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಹಬ್ಬ ಆಚರಣೆ ಬದಲಾಗಿ ಸಂತ್ರಸ್ತರ ಅಹವಾಲು ಕೇಳಲು ಮಾಜಿ ಸಿಎಂ ಕುಮಾರಸ್ವಾಮಿ ಮುಂದಾಗಿದ್ದಾರೆ. ದೀಪಾವಳಿ ಹಬ್ಬದ ದಿನ ನೆರೆ ಪೀಡಿತ ಕ್ಷೇತ್ರಗಳಿಗೆ ಎಚ್​ಡಿಕೆ ಪ್ರವಾಸ ಕೈಗೊಳ್ಳಲಿದ್ದಾರೆ. ಮೂರು ದಿನ ಸಂತ್ರಸ್ತರ ಅಳಲನ್ನು ಆಲಿಸಿ ಪರಿಹಾರ ಒದಗಿಸಲು ಎಚ್ಡಿಕೆ ಮುಂದಾಗಿದ್ದು, ಬೆಳಗಾವಿಯ ಹುಕ್ಕೇರಿ, ಕಾಗವಾಡ, ಅಥಣಿ ಭಾಗದ ನೆರೆ ಪೀಡಿತ ಪ್ರದೇಶ ಹಾಗೂ ಹಾವೇರಿ, ಹಿರೇಕೆರೂರು, ರಾಣಿಬೆನ್ನೂರು ತಾಲೂಕಿನ ನೆರೆಪೀಡಿತ ಪ್ರದೇಶಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಸ್ಥಳೀಯ ಜೆಡಿಎಸ್ ಕಾರ್ಯಕರ್ತರಿಂದ ನೆರೆ ಸಂತ್ರಸ್ತರಿಗೆ ನೆರವು ಒದಗಿಸಲಿದ್ದಾರೆ. ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿ ಪರಿಹಾರ ಒದಗಿಸಲು ಸರ್ಕಾರದ ಮೇಲೆ ಒತ್ತಡ ಹಾಕಲು ಮಾಜಿ ಸಿಎಂ ಎಚ್​ಡಿಕೆ ನಿರ್ಧರಿಸಿದ್ದಾರೆ.